ಮಹಾಲಕ್ಷ್ಮೀ ಸಭಾ ಭವನವನ್ನು ಲೋಕಾರ್ಪಣೆಗೊಳಿಸಿದ ರಮೇಶ ಜಾರಕಿಹೊಳಿ,ಸತೀಶ ಜಾರಕಿಹೊಳಿ,ಬಾಲಚಂದ್ರ ಜಾರಕಿಹೊಳಿ,ಲಖನ್ ಜಾರಕಿಹೊಳಿ ಕಾರ್ಯಕ್ರಮದಲ್ಲಿ ಭಾಗಿ
January 27, 2022 2022-01-27 17:09ಮಹಾಲಕ್ಷ್ಮೀ ಸಭಾ ಭವನವನ್ನು ಲೋಕಾರ್ಪಣೆಗೊಳಿಸಿದ ರಮೇಶ ಜಾರಕಿಹೊಳಿ,ಸತೀಶ ಜಾರಕಿಹೊಳಿ,ಬಾಲಚಂದ್ರ ಜಾರಕಿಹೊಳಿ,ಲಖನ್ ಜಾರಕಿಹೊಳಿ ಕಾರ್ಯಕ್ರಮದಲ್ಲಿ ಭಾಗಿ

ಮಹಾಲಕ್ಷ್ಮೀ ಸಭಾ ಭವನವನ್ನು ಲೋಕಾರ್ಪಣೆಗೊಳಿಸಿದ ರಮೇಶ ಜಾರಕಿಹೊಳಿ,ಸತೀಶ ಜಾರಕಿಹೊಳಿ,ಬಾಲಚಂದ್ರ ಜಾರಕಿಹೊಳಿ,ಲಖನ್ ಜಾರಕಿಹೊಳಿ ಕಾರ್ಯಕ್ರಮದಲ್ಲಿ ಭಾಗಿ
ಜನಸಾಮಾನ್ಯರ ಅನುಕೂಲಕ್ಕಾಗಿ ಅತ್ಯಾಧುನಿಕವಾಗಿ ಗೋಕಾಕ ನಗರದಲ್ಲಿ ಮಹಾಲಕ್ಷ್ಮೀ ಸಭಾ ಭವನ ನಿರ್ಮಿಸಲಾಗಿದ್ದು, ಇದನ್ನು ಸಾರ್ವಜನಿಕರು ಸದ್ಬಳಕೆ ಮಾಡಿಕೊಳ್ಳುವಂತೆ ಶಾಸಕ ಹಾಗೂ ಮಾಜಿ ಸಚಿವ ರಮೇಶ ಜಾರಕಿಹೊಳಿ ತಿಳಿಸಿದರು.
ಇಲ್ಲಿಯ ಮಹಾಲಕ್ಷ್ಮೀ ದೇವಸ್ಥಾನದ ಆವರಣದಲ್ಲಿ ಗುರುವಾರದಂದು ೪.೫೦ ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತವಾಗಿ ನಿರ್ಮಿಸಿದ ಮಹಾಲಕ್ಷ್ಮೀ ಸಭಾ ಭವನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಈ ಸಭಾ ಭವನ ನಿರ್ಮಾಣದಿಂದ ಜನ ಸಾಮಾನ್ಯರಿಗೆ ಹೆಚ್ಚು ಅನುಕೂಲವಾಗಲಿದೆ ಎಂದು ಹೇಳಿದರು.


ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ಸತೀಶ ಜಾರಕಿಹೊಳಿ ಅವರು ಮಹಾಲಕ್ಷ್ಮೀ ಸಭಾ ಭವನದ ವಸತಿ ಕೊಠಡಿಗಳನ್ನು ಉದ್ಘಾಟಿಸಿದರು.
ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹಾಗೂ ವಿಧಾನ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ಅವರು ಜಂಟಿಯಾಗಿ ಭೋಜನಾಲಯವನ್ನು ಉದ್ಘಾಟಿಸಿದರು.
