ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಜಾರಿ
January 4, 2022 2022-01-04 22:38ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಜಾರಿ

ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಜಾರಿ
ಮುಂದಿನ 6 ತಾರೀಕಿನಿಂದ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಲು ನಿರ್ಧರಿಸಲಾಗಿದೆ. ಶುಕ್ರವಾರ ರಾತ್ರಿಯಿಂದ ಸೋಮವಾರ ಮುಂಜಾನೆ ವರೆಗೆ ಪ್ರತಿ ವಾರ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರಲಿದೆ ಎಂದು ಸಚಿವ ಆರ್. ಅಶೋಕ್ ಹೇಳಿದ್ದಾರೆ. ನೈಟ್ ಕರ್ಫ್ಯೂ ಮುಂದುವರಿಸಲು ನಿರ್ಧರಿಸಲಾಗಿದೆ. ಸರ್ಕಾರಿ ಕಚೇರಿ ಹಾಗೂ ಸಾರ್ವಜನಿಕ ಸ್ಥಳಗಳಿಗೆ ಐವತ್ತು ಶೇಕಡಾ ಜನರಿಗೆ ಮಾತ್ರ ಅವಕಾಶ ನೀಡಲಾಗುವುದು ಎಂದಿದ್ದಾರೆ. ಮದುವೆ ಹೊರಾಂಗಣದಲ್ಲಿ ಆದರೆ ಇನ್ನೂರು ಜನ, ಒಳಾಂಗಣ ಆದರೆ ನೂರು ಜನಕ್ಕೆ ಮಾತ್ರ ಅನುಮತಿ ನೀಡಲಾಗುತ್ತದೆ, ವ್ಯಾಕ್ಸಿನ್ ಕಡ್ಡಾಯ ಎಂದು ಹೇಳಿದ್ದಾರೆ. ಹೊರ ರಾಜ್ಯದಿಂದ ಬರುವವರಿಗೆ ನೆಗೆಟಿವ್ ವರದಿ ಕಡ್ಡಾಯಗೊಳಿಸಲಾಗಿದೆ. ವಿದೇಶದಿಂದ ಬರುವವರಿಗೆ ಕೇಂದ್ರದ ನಿಯಮಗಳೇ ಜಾರಿಯಲ್ಲಿರಲಿವೆ ಎಂದು ಅವರು ಹೇಳಿದ್ದಾರೆ. ಬೆಂಗಳೂರಲ್ಲಿ 10 ಮತ್ತು 12 ತರಗತಿ ಹೊರತುಪಡಿಸಿ, ಬೇರೆಲ್ಲಾ ತರಗತಿಗಳನ್ನು ಮುಚ್ಚಲಾಗುವುದು. ಆನ್ ಲೈನ್ ತರಗತಿ ನಡೆಸಬೇಕು ಎಂದು ಎಂದು ಸಚಿವ ಆರ್. ಅಶೋಕ್ ಹೇಳಿದ್ದಾರೆ.