ಶಕ್ತಿ ಏಡ್ಸ್ ತಡೆಗಟ್ಟುವ ಮಹಿಳಾ ಸಂಘದ ರಾಜ್ಯದಲ್ಲೇ ಪ್ರಥಮ ಸ್ವಂತ ಕಟ್ಟಡ
January 7, 2022 2022-01-07 17:10ಶಕ್ತಿ ಏಡ್ಸ್ ತಡೆಗಟ್ಟುವ ಮಹಿಳಾ ಸಂಘದ ರಾಜ್ಯದಲ್ಲೇ ಪ್ರಥಮ ಸ್ವಂತ ಕಟ್ಟಡ

ಶಕ್ತಿ ಏಡ್ಸ್ ತಡೆಗಟ್ಟುವ ಮಹಿಳಾ ಸಂಘದ ರಾಜ್ಯದಲ್ಲೇ ಪ್ರಥಮ ಸ್ವಂತ ಕಟ್ಟಡ
ಗೋಕಾಕ್: ಗೋಕಾಕ ನ ಸತೀಶ್ ನಗರದ, 5ನೇ ಕ್ರಾಸ್ ನಲ್ಲಿ ತಲೆಯೆತ್ತಿ ನಿಂತಿರುವ ಶಕ್ತಿ ಏಡ್ಸ್ ತಡೆಗಟ್ಟುವ ಮಹಿಳಾ ಸಂಘದ ರಾಜ್ಯದಲ್ಲೇ ಪ್ರಥಮ ಬಾರಿಗೆ ಸ್ವಂತ ಕಟ್ಟಡವನ್ನು ಜನಪ್ರಿಯ ಶಾಸಕರಾದ ಸತೀಶ್ ಜಾರಕಿಹೊಳಿ ಯವರು ಉದ್ಘಾಟಿಸಿದರು.
ವೃತ್ತಿನಿರತ ಮಹಿಳೆಯರ ಸಂಘಟನಾ ಸಾಮರ್ಥ್ಯಕ್ಕೆ ಸಾಕ್ಷಿಯಾಗಿರುವ ಕಟ್ಟಡ ಈ ಮಾದರಿಯ ದೇಶದ ಪ್ರಯತ್ನಗಳಲ್ಲಿಯೇ ವಿಶಿಷ್ಟವಾದುದು.

ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರು ಬೆಳಗಾವಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಲೀಲಾ ಸಂಪಿಗೆ ಅವರ ಸಹಾಯದಿಂದ ಶಕ್ತಿ ಏಡ್ಸ್ ತಡೆಗಟ್ಟುವ ಮಹಿಳಾ ಸಂಘದ ಪದಾಧಿಕಾರಿಗಳು ಮನವಿ ಸಲ್ಲಿಸಿದ್ದರು. ಈ ವೃತ್ತಿನಿರತ ಹೆಣ್ಣುಮಕ್ಕಳ ಬರ್ಬರ ಬದುಕಿನ ಬಗ್ಗೆ ಕಾಳಜಿಯಿದ್ದ ಅವರು ತಮ್ಮ ಶಾಸಕ ನಿಧಿಯ ಅನುದಾನದಿಂದ ನೆರವಿನ ಭರವಸೆ ನೀಡಿ, ಕೂಡಲೇ ಜಾರಿಯಾಗುವಂತೆ ಮಾಡಿದರು. ಅದರ ಪ್ರತಿಫಲವೇ ಇದೀಗ ತಲೆಯೆತ್ತಿ ನಿಂತಿರುವ ಶಕ್ತಿ ತಡೆಗಟ್ಟುವ ಮಹಿಳೆಯರ ಸಂಘದ ಈ ಸ್ವಂತ ಕಟ್ಟಡ.
